WCD Recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಬರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಇವುಗಳಲ್ಲಿ ಯಾವುದಾದರೂ ಒಂದು ಪಾಸಾದರೆ ಅರ್ಜಿ ಸಲ್ಲಿಸಬಹುದು ಈ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಈಗ ರಾಯಚೂರು, ರಾಮನಗರ ಮತ್ತು ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆನ್ಲೈನ್ ಮೂಲಕ ಕರೆಯಲಾಗಿದೆ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಇದೇ ರೀತಿ ಸರಕಾರಿ ಹುದ್ದೆಗೆ ಸಂಬಂಧಿಸಿದ ಮಾಹಿತಿ ಬೇಕಾದರೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್..! ನಿಮ್ಮ ಅರ್ಜಿ ರಿಜೆಕ್ಟ್ ಆಗಿದೆಯಾ ಈ ರೀತಿ ಚೆಕ್ ಮಾಡಿ
ವಿವಿಧ ಜಿಲ್ಲೆಗಳಲ್ಲಿ ಸರಕಾರಿ ಉದ್ಯೋಗ (WCD Recruitment 2024)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಜಿಲ್ಲೆಗಳಾದ ರಾಯಚೂರು, ರಾಮನಗರ ಜಿಲ್ಲೆ & ಗದಗ ಜಿಲ್ಲೆ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಉಳ್ಳವರು ಸೆಪ್ಟೆಂಬರ್ 30 ನೇ ತಾರೀಖಿನ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ರಾಯಚೂರು , ರಾಮನಗರ ಜಿಲ್ಲೆ & ಗದಗ ಜಿಲ್ಲೆಗಳಲ್ಲಿ ಸುಮಾರು 580 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಖಾಲಿ ಇವೆ ಆಸಕ್ತಿ ಇರುವಂತವರು 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಇವುಗಳಲ್ಲಿ ಯಾವುದಾದರು ಒಂದು ಅರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ವಿವರಿಸಲಾಗಿದೆ
ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ (WCD Recruitment 2024)..?
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 143 ಹುದ್ದೆಗಳು
ಉದ್ಯೋಗ ಸ್ಥಳ:- ರಾಯಚೂರು ಜಿಲ್ಲೆ
ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ನೇಮಕಾತಿ ವಿಧಾನ:- ನೇರ ನೇಮಕಾತಿ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:- 29/09/2024
ಸಂಬಳ:- ₹8,000-15,000 ವರೆಗೆ
ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ (WCD Recruitment 2024)..?
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 217 ಹುದ್ದೆಗಳು
ಕಾರ್ಯಕರ್ತೆ ಹುದ್ದೆಗಳು:- 80 ಖಾಲಿ ಹುದ್ದೆಗಳ ಸಂಖ್ಯೆ
ಸಹಾಯಕಿ ಹುದ್ದೆಗಳು:- 137 ಖಾಲಿ ಹುದ್ದೆಗಳ ಸಂಖ್ಯೆ
ಉದ್ಯೋಗ ಸ್ಥಳ:- ರಾಮನಗರ ಜಿಲ್ಲೆ
ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ನೇಮಕಾತಿ ವಿಧಾನ:- ನೇರ ನೇಮಕಾತಿ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:- 30/09/2024
ಸಂಬಳ:- ₹8,000-15,000 ವರೆಗೆ
ಗದಗ ಜಿಲ್ಲೆಯ ಖಾಲಿ ಇರುವ ಹುದ್ದೆಗಳ ವಿವರ (WCD Recruitment 2024)..?
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 196 ಹುದ್ದೆಗಳು
ಉದ್ಯೋಗ ಸ್ಥಳ:- ಗದಗ ಜಿಲ್ಲೆಯಲ್ಲಿ
ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ನೇಮಕಾತಿ ವಿಧಾನ:- ನೇರ ನೇಮಕಾತಿ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:- 17/09/2024
ಸಂಬಳ:- ₹8,000-15,000 ವರೆಗೆ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (WCD Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಅಥವಾ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ ಮಾಡಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು
ವಯಸ್ಸಿನ ಮಿತಿ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯ ವಯಸ್ಸು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗಿನವರು ಆಗಿರಬೇಕು ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ಇದೆ ಹೌದು ಸ್ನೇಹಿತರೆ ಹಿಂದುಳಿದ ವರ್ಗದವರಿಗೆ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಲಿಕ್ಕೆ ಇದೆ
ಅರ್ಜಿ ಶುಲ್ಕ ಎಷ್ಟು:- ಅಂಗನವಾಡಿ (WCD Recruitment 2024) ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ (apply) ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ (apply online Karnataka) ಮಹಿಳೆಯರಿಗೆ ಯಾವುದೇ ರೀತಿ (no apply fees) ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಪ್ರತಿಯೊಬ್ಬರೂ ಉಚಿತವಾಗಿ (apply) ಅರ್ಜಿ ಸಲ್ಲಿಸಬಹುದು
ಆಯ್ಕೆಯ ವಿಧಾನ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರ ಪೈಕಿ ತಾವು ಶೈಕ್ಷಣಿಕ ಅರ್ಹತೆಯ ಮೇಲೆ ಅಥವಾ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಇಲ್ಲಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಅಂದರೆ ಅತಿ ಹೆಚ್ಚು ಅಂಕಗಳಿಸಿದವರಿಗೆ ಮೊದಲ ಆಯ್ಕೆಯಾಗಿರುತ್ತದೆ
ಸಂಬಳ:- ಸ್ನೇಹಿತರೆ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದಂತ ಮಹಿಳೆಯರಿಗೆ 8000 ರಿಂದ 15000 ಮಾಸಿಕ ಸಂಬಳ ನೀಡಲಾಗುತ್ತದೆ
ಅಗತ್ಯ ದಾಖಲಾತಿಗಳು:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರ ಮಹಿಳೆಯ 10ನೇ ತರಗತಿ ಪಾಸ್ ಆದ ಮಾರ್ಕ್ಸ್ ಕಾರ್ಡ್ ಹಾಗೂ ಈ ಉದ್ಯೋಗಕ್ಕೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯ ಎಲ್ಲಾ ಮಾರ್ಕ್ಸ್ ಕಾರ್ಡ್ ಗಳು ಮತ್ತು ಮಹಿಳೆಯ ಆಧಾರ್ ಕಾರ್ಡ್ ಹಾಗೂ ಇತ್ತೀಚಿನ ಫೋಟೋ ಮತ್ತು ವಿಶೇಷ ಪ್ರಮಾಣ ಪತ್ರ ಅಂದರೆ ಪರಿಶಿಷ್ಟ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಥವಾ ವಿಧವೆ ಪ್ರಮಾಣ ಪತ್ರ ಅಥವಾ ಅಂಗವಿಕಲ ಪ್ರಮಾಣ ಪತ್ರ ಮುಂತಾದ ಅಗತ್ಯ ದಾಖಲಾತಿಗಳು ಅರ್ಜಿ ಸಲ್ಲಿಸಲು ಬೇಕಾಗುತ್ತವೆ
ಅರ್ಜಿ ಸಲ್ಲಿಸುವುದು ಹೇಗೆ (WCD Recruitment 2024)..?
ಸ್ನೇಹಿತರೆ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಮೊದಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ ಕೃಪೆ ಅಥವಾ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಕೆಲಸ ಮಾಡಲು ಬಯಸುವಂತಹ ಮಹಿಳೆಯರಿಗೆ ಈ ಒಂದು ಲೇಖನ ಶೇರ್ ಮಾಡಿ ಹಾಗೂ ಇದೇ ರೀತಿ ಸರಕಾರಿ ಉದ್ಯೋಗ ಮತ್ತು ಖಾಸಗಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು